আবহাওয়া আইপিএল-2025 টাকা পয়সা পশ্চিমবঙ্গ ভারত ব্যবসা চাকরি রাশিফল স্বাস্থ্য প্রযুক্তি লাইফস্টাইল শেয়ার বাজার মিউচুয়াল ফান্ড আধ্যাত্মিক অন্যান্য
---Advertisement---

ಸ್ಕಾಲರ್ಶಿಪ್ ಗಾಗಿ ಅರ್ಜಿ ಆಹ್ವಾನ-2026 : ಆನ್ ಲೈನ್ ಲಿಂಕ್ ಇಲ್ಲಿದೆ – ತಡ ಮಾಡದೇ ಅರ್ಜಿ ಹಾಕಿ | application invitation for 2026 scholarship

Published on: June 21, 2026
---Advertisement---

ಕಲಬುರಗಿ,ಜೂ.21 : ಸ್ಕಾಲರ್ಶಿಪ್ ಗಾಗಿ ಅರ್ಜಿ ಆಹ್ವಾನ-2026 : ಆನ್ ಲೈನ್ ಲಿಂಕ್ ಇಲ್ಲಿದೆ – ತಡ ಮಾಡದೇ ಅರ್ಜಿ ಹಾಕಿ | application invitation for 2026 scholarship.. ಪ್ರಸಕ್ತ 2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ  ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನುಸಲಾಗಿದೆ. ಯಾರು ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಹೇಗೆ ಸಲ್ಲಿಸಬೇಕು ? ಪೂರ್ಣ ವಿವರ ಇದರಲ್ಲಿದೆ ಓದಿ.

ಅಲೆಮಾರಿ , ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ–ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ /ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

application invitation for 2026 scholarship

ಪ್ರವೇಶ ಬಯಸುವ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2026ರ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಪಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ಧೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ಧೃಢೀಕರಿಸಿ ಸೇಡಂ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ 2026ರ ಆಗಸ್ಟ್ 31 ರೊಳಗಾಗಿ ಕಡ್ಡಾಯವಾಗಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು.

ಒಂದು ವೇಳೆ ನಿಗದಿತ ದಿನಾಂಕದೊಳಗೆ ದಾಖಲೆ ಸಲ್ಲಿಸದಿದ್ದಲ್ಲಿ ಅಂತಹ ಅರ್ಜಿ ಅನುರ್ಜಿತಗೊಳಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in/ ವೆಬ್‍ಸೈಟ್‍ಗೆ ಸಂಪರ್ಕಿಸಲು ಕೋರಲಾಗಿದೆ.

ಸೇಡಂ ತಾಲೂಕಿನ ಪ್ರತಿಯೊಬ್ಬ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಭವಿಷ್ಯದಲ್ಲಿ ಸ್ಕಾಲರಸಿಪ್ ಪಡೆಯುವಂತಾಗಲಿ.

Join WhatsApp

Join Now

Join Telegram

Join Now

Leave a Comment